ಸೋಮವಾರ, ಏಪ್ರಿಲ್ 19, 2021
31 °C

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಕೇಂದ್ರ ಸಚಿವ ರಾಮದಾಸ್‌ ಅಠವಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 200 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ. ಈ ಮೂಲಕ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ರಾಮದಾಸ್‌ ಅಠವಳೆ ಅವರು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪಕ್ಷಕ್ಕೂ ನಾಲ್ಕೈದು ಸ್ಥಾನಗಳನ್ನು ನೀಡುವಂತೆ ಕೋರುತ್ತೇನೆ ಎಂದು ಅವರು ಹೇಳಿದರು. ರಾಮದಾಸ್‌ ಅವರ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಬಿಜೆಪಿಯ ಮಿತ್ರ ಪಕ್ಷವಾಗಿದೆ.

ಗೋವಾ ಮುಖ್ಯಮಂತ್ರಿ ಅವರನ್ನು ರಾಮದಾಸ್ ಸೋಮವಾರ ಭೇಟಿಯಾದರು. ಬಳಿಕ ಮಾತನಾಡಿದ ಅವರು,‘ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಅವರ ಭೇಟಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಕೆಲವೇ ದಿನಗಳು ಉಳಿದಿವೆ ಎಂಬುದನ್ನು ಸಾಬೀತು ಮಾಡುತ್ತದೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು