ಮಂಗಳವಾರ, ಜನವರಿ 25, 2022
25 °C

ಅಶೋಕ್ ಗೆಹಲೋತ್ ಸರ್ಕಾರ ಅದಾಗಿಯೇ ಪತನವಾಗಲಿದೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ಅಶೋಕ್ ಗೆಹಲೋತ್ ನೇತೃತ್ವದ ರಾಜಸ್ಥಾನ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಉರುಳಿಸುವುದಿಲ್ಲ. ಅದಾಗಿಯೇ ಪತನಗೊಳ್ಳಲಿದೆ ಎಂದು ಬಿಜೆಪಿಯ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ.

ಆಂತರಿಕ ಕಚ್ಚಾಟದ ಹೊರತಾಗಿಯೂ ಸರ್ಕಾರ ಅವಧಿ ಪೂರೈಸಿದ್ದೇ ಆದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದಾಗಿ ರಾಜಸ್ಥಾನದಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಸರ್ಕಾರವನ್ನು ರಚಿಸುವ ವಿಶ್ವಾಸವಿದೆ ಎಂದೂ ಅವರು ಹೇಳಿದ್ದಾರೆ.

ಓದಿ: 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಸ್ಥಾನ ಸರ್ಕಾರ ಪತನಕ್ಕೆ ಮುಂದಾಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಪೂನಿಯಾ, ರಾಜ್ಯದ ಯುವಕರು ಮತ್ತು ರೈತರು ಅಶೋಕ್ ಗೆಹಲೋತ್ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಬಿಜೆಪಿಯು ಸರ್ಕಾರ ಪತನಗೊಳಿಸಲು ಮುಂದಾಗುವುದಿಲ್ಲ. ಅದಾಗಿಯೇ ಆಂತರಿಕ ಕಚ್ಚಾಟಗಳಿಂದ ಪತನವಾಗಲಿದೆ. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾರರೇ ಕಾಂಗ್ರೆಸ್ ಅನ್ನು ಉಚ್ಚಾಟಿಸಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು