ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ 30ರಲ್ಲಿ 26 ಸ್ಥಾನ ಗಳಿಸಲಿದೆ ಬಿಜೆಪಿ: ಅಮಿತ್ ಶಾ

Last Updated 28 ಮಾರ್ಚ್ 2021, 10:50 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಯು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕನಿಷ್ಠ 26 ಮತ್ತು ಅಸ್ಸಾಂನಲ್ಲಿ 37 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸುವ ವಿಶ್ವಾಸ ಹೊಂದಿದೆ ಎಂದು ಶಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದ 294 ಸ್ಥಾನಗಳ ಪೈಕಿ 200ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದ್ದಾರೆ.

ಜನರು ಮತದಾನದ ಬಗ್ಗೆ ಉತ್ಸುಕರಾಗಿದ್ದಾರೆ. ಪಶ‌್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಶೇ 84 ಮತ್ತು ಅಸ್ಸಾಂನಲ್ಲಿ ಶೇ 79 ಮತದಾನವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಈ ಮೊದಲು ಹಿಂಸಾಚಾರ ನಡೆಯುತ್ತಿತ್ತು, ಆದರೆ ಈ ಬಾರಿ ಯಾವುದೇ ಅಂತಹ ಘಟನೆ ಸಂಭವಿಸಿಲ್ಲ ಎಂದು ಶಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಐದು ಜಿಲ್ಲೆಗಳಲ್ಲಿ 30 ಸ್ಥಾನಗಳಿಗೆ ಮತ್ತು ಅಸ್ಸಾಂನಲ್ಲಿ 12 ಜಿಲ್ಲೆಗಳ 47 ಸ್ಥಾನಗಳಿಗೆ ಶನಿವಾರ ಮೊದಲ ಹಂತದಲ್ಲಿ ಮತದಾನ ನಡೆದಿತ್ತು.

ಅಸ್ಸಾಂನಲ್ಲಿ 3 ಹಂತಗಳಲ್ಲಿ ಮತ್ತು ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT