ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಕೇಶವ ಪ್ರಸಾದ್ ಮೌರ್ಯ

ಲಖನೌ: ವಿಧಾನಸಭಾ ಚುನಾವಣಾ ಕಾವು ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರ ನಡುವೆ ವಾಕ್ಸಮರಕ್ಕೂ ದಾರಿ ಮಾಡಿಕೊಟ್ಟಿದೆ.
ಉತ್ತರ ಪ್ರದೇಶದಲ್ಲಿ ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ, ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ನಾಯಕ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಸುದ್ದಿಸಂಸ್ಥೆ ಐಎಎನ್‌ಎಸ್ ಜತೆ ಮಾತನಾಡಿರುವ ಅವರು, ಬಿಜೆಪಿ ಚುನಾವಣೆಗೆ ಸದಾ ಸಿದ್ಧವಾಗಿರುತ್ತದೆ. ಮಾರ್ಚ್ 10 ರಂದು ಫಲಿತಾಂಶ ಬಂದ ಬಳಿಕ ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ ಮತ್ತು ಕಾಂಗ್ರೆಸ್ ಕಣ್ಮರೆಯಾಗಲಿವೆ ಎಂದಿದ್ದಾರೆ.
ವಿಧಾನಸಭಾ ಚುನಾವಣೆಯ ಬಳಿಕ ಪಕ್ಷ 2024ರ ಲೋಕಸಭಾ ಚುನಾವಣೆಗೆ ಸಜ್ಜಾಗಲಿದೆ. ಸೂಕ್ತ ತಯಾರಿಯನ್ನು ಬಿಜೆಪಿ ಆರಂಭಿಸಲಿದೆ ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ | ಶಾಂತಿಭಂಗ ಮಾಡುವವರಿಗೆ ಎಸ್ಪಿ ಟಿಕೆಟ್: ಯೋಗಿ ಆರೋಪ
ವಿಕಪ್ಷಗಳು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಪ್ರತ್ಯಕ್ಷವಾಗುತ್ತವೆ ಮತ್ತು ಅಧಿಕಾರಕ್ಕಾಗಿ ಕಾಯುತ್ತಿರುತ್ತವೆ ಎಂದು ಮೌರ್ಯ ಅವರು ಟೀಕಿಸಿದ್ದಾರೆ.
UP Elections 2022 | ನಾನು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ: ಪ್ರಿಯಾಂಕಾ ಗಾಂಧಿ
ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.