ಶುಕ್ರವಾರ, ಜೂನ್ 25, 2021
29 °C

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ : ಪಕ್ಷದ ಕಾರ್ಯಕರ್ತನ ಹತ್ಯೆ ಖಂಡಿಸಿ ಪಶ್ಚಿಮ ಬಂಗಾಳದ ಖಾನಕುಲ್‌ನಲ್ಲಿ ಬಿಜೆಪಿ ಭಾನುವಾರ ಕರೆ ನೀಡಿದ್ದ ಬಂದ್‌ ಭಾಗಶಃ ಯಶಸ್ವಿಯಾಗಿದೆ.

‌ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹುತೇಕ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಜನರ ಸಂಚಾರ ವಿರಳವಾಗಿತ್ತು. 

ರಾಷ್ಟ್ರಧ್ವಜವನ್ನು ಹಾರಿಸಿದ್ದಕ್ಕಾಗಿ ಪಕ್ಷದ ಕಾರ್ಯಕರ್ತ ಸುದರ್ಶನ್ ಪ್ರಮಣಿಕ್ (40) ಅವರನ್ನು ಟಿಎಂಸಿ ಬೆಂಬಲಿಗರು ಥಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಟಿಎಂಸಿ ನಿರಾಕರಿಸಿದೆ. 

ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜ ಹಾರಿಸುವ ಸಂಬಂಧ, ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಘಟನೆ ಸಂಬಂಧ ಈವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು