ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಕೋವಿಡ್‌ ನಿರ್ವಹಣೆಗಿಂತಲೂ ಯುಪಿ ಚುನಾವಣೆಯೇ ಮುಖ್ಯ: ಶಿವಸೇನಾ

Last Updated 26 ಮೇ 2021, 10:37 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ಬದಲು ಬಿಜೆಪಿ ತನ್ನ ಇಮೇಜ್ ಅನ್ನು ಹೇಗೆ ಸುಧಾರಿಸಿಕೊಳ್ಳುವುದು ಮತ್ತು ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದು ಹೇಗೆನ್ನುವುದರ ಕುರಿತು ಕಾರ್ಯನಿರ್ವಹಿಸುತ್ತಿದೆ ಎಂದು ಶಿವಸೇನಾ ಟೀಕಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ವಿಫಲವಾದ ಬಳಿಕ ಬಿಜೆಪಿ ನಾಯಕರು ಉತ್ತರ ಪ್ರದೇಶದತ್ತ ಗಮನ ಹರಿಸಿದ್ದಾರೆ ಎಂದು ಶಿವಸೇನಾ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

‘ಮಿಷನ್ ಉತ್ತರ ಪ್ರದೇಶ’ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಉತ್ತರಪ್ರದೇಸ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಭೆ ನಡೆಸಿದ್ದಾರೆ ಎಂದು ಮರಾಠಿ ದಿನಪತ್ರಿಕೆ ಹೇಳಿದೆ.

‘ದೇಶದಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಹಾಗಾಗಿ ಚುನಾವಣೆಗಳನ್ನು ಘೋಷಿಸಿ ಬೃಹತ್‌ ಚುನಾವಣಾ ರ‍್ಯಾಲಿಗಳು ಮತ್ತು ರೋಡ್‌ ಶೋಗಳನ್ನು ನಡೆಸುವುದು ಬಾಕಿ ಉಳಿದಿದೆ ಎಂದು ಶಿವಸೇನಾ ಕಿಡಿಕಾರಿದೆ.

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಪ್ರಮುಖ ಪಾತ್ರವಹಿಸುತ್ತವೆ. ಆದರೆ, ಪ್ರಸ್ತುತ ಪರಿಸ್ಥಿತಿಯಲ್ಲಿ ಚುನಾವಣಾ ಮತದಾನಕ್ಕೆ ಆದ್ಯತೆ ನೀಡುವುದು ಎಷ್ಟು ಸರಿ? ಎಂದು ಶಿವಸೇನಾ ಪ್ರಶ್ನಿಸಿದೆ.

ಉತ್ತರಪ್ರದೇಶ ಸರ್ಕಾರ ಕೋವಿಡ್‌ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಮತ್ತು 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊಂದರೆ ಎದುರಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

ಸದ್ಯ ಕೋವಿಡ್‌ ನಿವರ್ಹಣೆಯತ್ತ ಹೆಚ್ಚು ಒತ್ತು ನೀಡಬೇಕಿದೆ. ಗಂಗಾ ನಂದಿಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ದೇಹಗಳು ತೇಲಿ ಬರುತ್ತಿರುವ ದೃಶ್ಯಗಳು ದೇಶದ ಘನತೆಗೆ ಧಕ್ಕೆ ತರುತ್ತದೆ ಎಂದು ಶಿವಸೇನಾ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT