ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲಿಬಾನ್‌ ಕುರಿತು ಭಾರತದ ನಿಲುವು: ಮೋದಿ ನಡೆ ಖಂಡಿಸಿದ ಸುಬ್ರಮಣಿಯನ್ ಸ್ವಾಮಿ

Last Updated 29 ಆಗಸ್ಟ್ 2021, 19:45 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವೊಂದರಲ್ಲಿ ಅಫ್ಗಾನಿಸ್ತಾನದ ತಾಲಿಬಾನ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಉಲ್ಲೇಖಿಸದೆ ಇರುವ ಸಾಧ್ಯತೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಖಂಡಿಸಿದ್ದಾರೆ.

ಈ ಬಗ್ಗೆ ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ತಾಲಿಬಾನ್‌ನಿಂದ ಈಗಾಗಲೇ ತೊಂದರೆಗಳು ಆರಂಭವಾಗಿವೆ. ಹೀಗಿದ್ದರೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿರುವ ಭಾರತ ತಾಲಿಬಾನ್‌ ಅನ್ನು ಭಯೋತ್ಪಾದಕ ಸಂಘಟನೆ ಎಂಬ ಪದ ಕಿತ್ತುಹಾಕಿ ನಿರ್ಣಯ ಕೈಗೊಳ್ಳಲು ಮುಂದಾಗಿರುವುದನ್ನು ಕೇಳಿ ನನಗೆ ಅಚ್ಚರಿಯಾಗಿದೆ’ ಎಂದು ಹೇಳಿದ್ದಾರೆ.

ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್‌ ಅವರೊಂದಿಗೆ ವಿಶ್ವಸಂಸ್ಥೆಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಿದ ಮರುದಿನ ಸ್ವಾಮಿ ಅವರಿಂದ ಈ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT