ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 80 ಸ್ಥಾನ ಗೆಲ್ಲುವ ಗುರಿ –ಬಿಜೆಪಿ

Last Updated 22 ಜನವರಿ 2023, 11:52 IST
ಅಕ್ಷರ ಗಾತ್ರ

ಲಖನೌ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 80 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ ಕಾರ್ಯಕರ್ತರಿಗೆ ಭಾನುವಾರ ಕರೆ ನೀಡಿದ್ದಾರೆ.

ಇಲ್ಲಿನ ಬಿಜೆಪಿ ರಾಜ್ಯಕಾರ್ಯಕಾರಿಣಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಕಾರ್ಯಕರ್ತರು ದಣಿವರಿಯದೇ ಕೆಲಸ ಮಾಡಿದ್ದರಿಂದ ಅಜಂಗಢ ಮತ್ತು ರಾಂಪುರದ ಉಪಚುನಾವಣೆಗಳನ್ನು ಗೆಲ್ಲಲು ಸಾಧ್ಯವಾಯಿತು. ಖತೌಲಿ ಮತ್ತು ಮೈನ್‌ಪುರಿಯಲ್ಲಿ ನಮಗೆ ಸೋಲಾಯಿತು. ಇದನ್ನು ಅರಿತು ಕಾರ್ಯಕರ್ತರು ಇನ್ನು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆಗಳು ಈ ವೇಳೆಗೆ ನಡೆಯಬೇಕಿತ್ತು. ಆದರೆ ವಿರೋಧ ಪಕ್ಷಗಳು ಅಡ್ಡಿಪಡಿಸಿದ್ದರಿಂದ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ ಎಂದರು.

ಪ್ರತಿಷ್ಠಿತ ಜಿ–20 ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿರುವುದು ದೇಶದಲ್ಲಿ ಹೊಸ ಇತಿಹಾಸ ಬರೆದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದುಳಿದ ಜನರ ಹೆಸರಿನಲ್ಲಿ ರಾಜಕೀಯ ಮಾಡುವ ಮೂಲಕ ಉತ್ತರ ಪ್ರದೇಶದಲ್ಲಿ ಅಧಿಕಾರ ಪಡೆದ ಪಕ್ಷಗಳ ನಾಯಕರು ಮತ್ತು ಮುಖಂಡರು ತಮ್ಮ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಮಾತ್ರ ಲಾಭ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT