ಗುರುವಾರ , ಆಗಸ್ಟ್ 11, 2022
26 °C
ಸ್ಥಳೀಯ ಸಂಸ್ಥೆಗಳ ಚುನಾವಣೆ

ರಾಜಸ್ಥಾನದಲ್ಲಿ ಬಿಜೆಪಿಗೆ ಗೆಲುವು; ಮೋದಿ ನಾಯಕತ್ವದ ಮೇಲಿನ ನಂಬಿಕೆಯ ಸೂಚಕ –ನಡ್ಡಾ

‍ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕಾಂಗ್ರೆಸ್‌ ಆಡಳಿತವಿರುವ ರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಇದು ಬಡವರು, ರೈತರು ಮತ್ತು ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೇಲಿಟ್ಟಿರುವ ನಂಬಿಕೆಯ ಸೂಚಕವಾಗಿದೆ‘ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಡ್ಡಾ ಅವರು, ಕಾಂಗ್ರೆಸ್‌ ಸರ್ಕಾರವಿರುವ ರಾಜ್ಯದಲ್ಲಿ ಬಿಜೆಪಿಗೆ ಮತ ಹಾಕಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವಂತೆ ಮಾಡಿದ ಮಹಿಳೆಯರು, ರೈತರು ಮತ್ತು ಗ್ರಾಮಾಂತರ ಭಾತದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ‘ ಎಂದು ಪೋಸ್ಟ್ ಮಾಡಿದ್ದಾರೆ.

‘ಸ್ಥಳೀಯ ಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷವು ಹೆಚ್ಚಿನ ಸ್ಥಾನಗಳಿಸುತ್ತದೆ ಎಂಬ ಸಂಪ್ರದಾಯವನ್ನು ಈ ಚುನಾವಣೆ ತೊಡೆದು ಹಾಕಿದೆ. ಈಗ ರಾಜಸ್ಥಾನದ 21 ಜಿಲ್ಲೆಗಳಲ್ಲಿ ನಡೆದ ಪಂಚಾಯತ್ ಸಮಿತಿ ಮತ್ತು ಜಿಲ್ಲಾ ಪರಿಷತ್ ಚುನಾವಣೆಗಳ ಮೂಕಲ ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಸಜ್ಜಾಗಿದೆ‘ ಎಂದು ಟ್ವೀಟ್ ಮಾಡಿದ್ದಾರೆ.

4,371 ಪಂಚಾಯತ್ ಸಮಿತಿ ಸ್ಥಾನಗಳಲ್ಲಿ ಬಿಜೆಪಿ ಈಗಾಗಲೇ 1,835 ಸ್ಥಾನಗಳನ್ನು ಗಳಿಸಿದ್ದರೆ, ಕಾಂಗ್ರೆಸ್ 1,718 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಅದೇ ರೀತಿ, ಜಿಲ್ಲಾ ಪರಿಷತ್ತಿನ 636 ಸ್ಥಾನಗಳಲ್ಲಿ ಬಿಜೆಪಿ 266ರಲ್ಲಿ ಜಯಗಳಿಸಿದೆ. ಕಾಂಗ್ರೆಸ್‌ 204 ಸ್ಥಾನಗಳನ್ನು ಪಡೆದಿದೆ.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜಸ್ಥಾನ ಸೇರಿದಂತೆ ದೇಶದಾದ್ಯಂತ ಸಾವಿರಾರು ರೈತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲಿ, ಬಿಜೆಪಿಗೆ ಈ ಫಲಿತಾಂಶ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು