ಬುಧವಾರ, ಮೇ 19, 2021
22 °C

ಸೆಕ್ಷನ್‌ 144 ಉಲ್ಲಂಘನೆ: ಟಿಕಾಯತ್‌ ವಿರುದ್ಧ ಪ್ರಕರಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಂಬಾಲಾ (ಹರಿಯಾಣ): ಸೆಕ್ಷನ್‌ 144 ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್‌ ಟಿಕಾಯತ್‌ ಮತ್ತು ಇತರ 12 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಟಿಕಾಯತ್‌ ಸೇರಿದಂತೆ ಬಿಕೆಯು ನಾಯಕರು ಕಳೆದ ಶನಿವಾರ ದುರಲಿ ಗ್ರಾಮದಲ್ಲಿ ‘ಕಿಸಾನ್ ಮಜ್ದೂರ್ ಮಹಾ ಪಂಚಾಯತ್‌’ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

‘ಜಿಲ್ಲೆಯಲ್ಲಿ ಸೆಕ್ಷನ್‌ 144 ಜಾರಿಯಲ್ಲಿರುವುದರಿಂದ ‘ಮಹಾ ಪಂಚಾಯತ್‌’ ನಡೆಸದ್ದಂತೆ ಬಿಕೆಯು ಮುಖಂಡರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ, ಎಚ್ಚರಿಕೆಯನ್ನು ಪರಿಗಣಿಸದೆ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು