ರೈತ ನಾಯಕರ ಹೆಸರಲ್ಲಿ ನಕಲಿ ಫೇಸ್‌ಬುಕ್ ಪೇಜ್: ದೂರು ದಾಖಲು

ಗಾಜಿಯಾಬಾದ್ (ಉತ್ತರ ಪ್ರದೇಶ): ರೈತ ನಾಯಕ ರಾಕೇಶ್ ಟಿಕಾಯತ್ ಅವರ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಪುಟವನ್ನು ತೆರೆದು, ಅಶ್ಲೀಲ ಫೋಟೊಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಪದಾಧಿಕಾರಿಗಳು ಗುರುವಾರ ಕೌಶಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪರಿಚಯಸ್ಥರೊಬ್ಬರು ರಾಕೇಶ್ ಟಿಕಾಯತ್ ಅವರ ಹೆಸರಲ್ಲಿ ನಕಲಿ ಫೇಸ್‌ಬುಕ್ ಸೃಷ್ಟಿಸಿರುವ ಕುರಿತು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ದೂರಿನ ಪ್ರತಿಯ ಜತೆಗೆ ನಕಲಿ ಫೇಸ್‌ಬುಕ್ ಪುಟದ ಸ್ಕ್ರೀನ್ ಶಾಟ್‌ಗಳನ್ನು ಲಗತ್ತಿಸಿರುವುದಾಗಿ ಬಿಕೆಯು ಮಾಧ್ಯಮ ವಿಭಾಗದ ಉಸ್ತುವಾರಿ ಶಂಶರ್ ರಾಣಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ದೂರು ಸ್ವೀಕರಿಸಿರುವ ಠಾಣಾಧಿಕಾರಿ ಜ್ಞಾನೇಂದ್ರ ಸಿಂಗ್, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.