ಮಂಗಳವಾರ, ಡಿಸೆಂಬರ್ 1, 2020
17 °C

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷರ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಲ್ಕತ್ತಾ: ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಅಲಿಪುರ್ದಾರ್ ಜಿಲ್ಲೆಯ ಜೈಗಾಂವ್‌ಗೆ ತೆರಳುತ್ತಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಅವರ ಬೆಂಗಾವಲು ವಾಹನಗಳ ಮೇಲೆ ಗುರುವಾರ ಕಲ್ಲು ತೂರಲಾಗಿದೆ. ಅಲ್ಲದೆ, ಕಪ್ಪು ಬಾವುಟ ತೋರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಕಾರ್ಯಕರ್ತರು ಘೋಷ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇಲ್ಲಿಂದ ಹಿಂದಕ್ಕೆ ಹೋಗುವಂತೆ ಒತ್ತಾಯಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾಕಾರರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

ದಾಳಿಯಲ್ಲಿ ಘೋಷ್ ಅವರ ವಾಹನ ಭಾಗಶಃ ಹಾನಿಯಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಘೋಷ್, 'ಇದು ಹೊಸತೇನಲ್ಲ, ಈ ಹಿಂದೆ ನನ್ನ ಮೇಲೆ ಹಲವು ಬಾರಿ ಹಲ್ಲೆ ಮಾಡಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯ ಸೋಲಿನ ಭೀತಿಯಿಂದ ಟಿಎಂಸಿ ಮತ್ತು ಅವರ ಸ್ನೇಹಿತರು ಹತಾಶರಾಗಿದ್ದಾರೆ. ಹೀಗಾಗಿಯೇ ನಮ್ಮ ಮೇಲೆ ದಾಳಿ ಮಾಡಿದ್ದಾರೆ. ಇಲ್ಲಿ ಜನತಂತ್ರವಿದೆಯೇ? ಅವರ ತಂತ್ರಗಳು ಕೆಲಸ ಮಾಡುವುದಿಲ್ಲ. ಜನರು ನಮ್ಮೊಂದಿಗಿದ್ದಾರೆ. ರಾಜಕೀಯ ಹಿಂಸಾಚಾರವನ್ನು ತಡೆಯಲು ನಮಗೆ ಬಂಗಾಳದಲ್ಲಿ ಬದಲಾವಣೆ ಬೇಕು,' ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು