ಶನಿವಾರ, ಜೂನ್ 19, 2021
28 °C

ಕಪ್ಪು ಶಿಲೀಂಧ್ರ: ಪ್ರತ್ಯೇಕ ಚಿಕಿತ್ಸಾ ಕೇಂದ್ರ ತೆರೆಯಲು ದೆಹಲಿ ಸರ್ಕಾರ ಸಿದ್ಧತೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿಯ ಮೂರು ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಪ್ರತ್ಯೇಕ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಯೋಜಿಸಲಾಗಿದೆ ಎಂದು ದೆಹಲಿ ಸರ್ಕಾರ ಗುರುವಾರ ತಿಳಿಸಿದೆ.

ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್‌ ಅವರು ಅಧಿಕಾರಿಗಳು ಮತ್ತು ತಜ್ಞರ ಜೊತೆ ಪ್ರಮುಖ ಸಭೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು, ʼದೆಹಲಿಯ ಲೋಕ ನಾಯಕ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆ, ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಪ್ರತ್ಯೇಕ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುವುದುʼ ಎಂದು ಮಾಹಿತಿ ನೀಡಿದ್ದಾರೆ.

ಸಭೆ ಬಳಿಕ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಜ್ರಿವಾಲ್‌, ʼಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವುದನ್ನು ಪರಿಗಣಿಸಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯ ಸಭೆ ನಡೆಸಲಾಯಿತು. ನಾವು ಈ ಸೋಂಕು ಪ್ರಕರಣಗಳು ಹೆಚ್ಚಾಗದಂತೆ ತಡೆಯಬೇಕು ಮತ್ತು ಈಗಾಗಲೇ ಈ ರೋಗಕ್ಕೆ ತುತ್ತಾಗಿರುವವರಿಗೆ ಆದಷ್ಟು ಬೇಗ ಉತ್ತಮ ಚಿಕಿತ್ಸೆ ನೀಡಬೇಕಾಗಿದೆ. ಸೋಂಕು ತಡೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಕೆಲವು ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆʼ ಎಂದು ಹೇಳಿದ್ದಾರೆ.

 

 

 

ಮತ್ತೊಂದು ಟ್ವೀಟ್‌ನಲ್ಲಿ, ʼ1. ಎಲ್‌ಎನ್‌ಜೆಪಿ, ಜಿಟಿಬಿ ಮತ್ತು ರಾಜೀವ್‌ ಗಾಂಧಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸಾ ಕೇಂದ್ರಗಳನ್ನು ತೆರೆಯುವುದು.
2. ಚಿಕಿತ್ಸೆಗೆ ಬಳಸುವ ಔಷಧಗಳ ಸಮರ್ಥ ನಿರ್ವಹಣೆ.
3. ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದುʼ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು