ಭಾನುವಾರ, ಜೂನ್ 20, 2021
23 °C

ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣ: ಕಪ್ಪು ಶಿಲೀಂಧ್ರಕ್ಕೆ 52 ಜನರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಪುಣೆ: ಅತ್ಯಂತ ವಿರಳ ಹಾಗೂ ಹೆಚ್ಚು ಅಪಾಯಕಾರಿಯಾದ ಬ್ಲ್ಯಾಕ್‌ ಫಂಗಸ್‌ ಸೋಂಕು ದೇಶದ ವಿವಿಧ ಭಾಗಗಳಲ್ಲಿ ವರದಿಯಾಗುತ್ತಿದೆ.
ಕೋವಿಡ್‌ನಿಂದ ಚೇತರಿಸಿಕೊಂಡವರು ಅಥವಾ ಚೇತರಿಸಿಕೊಳ್ಳುತ್ತಿರುವವರಲ್ಲಿ ಈ ಸೋಂಕು ಪತ್ತೆಯಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಹಾಗಾಗಿಯೇ ಮಹಾರಾಷ್ಟ್ರ ಸರ್ಕಾರವು ಸಾಮಾನ್ಯ ಚಿಕಿತ್ಸಾ ಮಾನದಂಡವನ್ನೂ ರೂಪಿಸಿದೆ.

ಪುಣೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಈವರೆಗೆ 270 ಪ್ರಕರಣಗಳು ದೃಢಪಟ್ಟಿವೆ. ಕೋವಿಡ್‌ ಕಾಣಿಸಿಕೊಂಡ ನಂತರದ ದಿನಗಳಲ್ಲಿ ಈ ಸೋಂಕಿನಿಂದಾಗಿ ಮಹಾರಾಷ್ಟ್ರದಲ್ಲಿ 52 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್‌ಗಿಂತ ಮುಂಚೆಯೂ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ಇದ್ದವು. ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲಿ 4–5 ‍ಪ್ರಕರಣಗಳಷ್ಟೇ ವರದಿಯಾಗಿದ್ದವು ಎಂದು ಪುಣೆಯ ನೋಬಲ್‌ ಆಸ್ಪತ್ರೆಯ ಡಾ. ಅಭಿಷೇಕ್‌ ಘೋಷ್‌ ಹೇಳಿದ್ದಾರೆ. 

ಮಹಾರಾಷ್ಟ್ರದಲ್ಲಿ ಸುಮಾರು 1,500 ಪ್ರಕರಣಗಳು ಪತ್ತೆಯಾಗಿವೆ ಎಂದು ಅಲ್ಲಿನ ಆರೋಗ್ಯ ಸಚಿವ ರಾಜೇಶ್‌ ಟೋಪೆ ಬುಧವಾರ ಹೇಳಿದ್ದರು. ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿಯೂ ಕೆಲವು ಪ್ರಕರಣಗಳು ದೃಢಪಟ್ಟಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು