ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ರಾಸಾಯನಿಕ ಕಾರ್ಖಾನೆಯಲ್ಲಿ ಅವಳಿ ಸ್ಫೋಟ; ನಾಲ್ವರು ಕಾರ್ಮಿಕರ ಸಾವು

Last Updated 20 ಮಾರ್ಚ್ 2021, 8:39 IST
ಅಕ್ಷರ ಗಾತ್ರ

ಮುಂಬೈ: ಮುಂಬೈನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅವಳಿ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರತ್ನಾಗಿರಿ ಜಿಲ್ಲೆಯ ಖೆಡ್ ತಾಲೂಕದಲ್ಲಿ ಸ್ಥಿತಗೊಂಡಿರುವ ರಾಸಾಯನಿಕ ಕಾರ್ಖಾನೆಯ ಎಂಐಡಿಸಿ ಘಟಕದಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ.

ದುರ್ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿಶಾಮಕದಳದ ತ್ವರಿತ ಕಾರ್ಯಾಚರಣೆಯಿಂದಾಗಿ 40ರಷ್ಟು ಕಾರ್ಮಿಕರನ್ನು ರಕ್ಷಿಸಲಾಗಿದೆ.

ಕೂಲಿಂಗ್ ಕಾರ್ಯಾಚರಣೆ ವೇಳೆ ಸ್ಫೋಟ ಸಂಭವಿಸಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT