ಸೋಮವಾರ, ಸೆಪ್ಟೆಂಬರ್ 27, 2021
21 °C

ಜಮ್ಮು ವಾಯುಪಡೆ ವಿಮಾನ ನಿಲ್ದಾಣದಲ್ಲಿ ಸ್ಫೋಟ: ಬಾಂಬ್ ನಿಷ್ಕ್ರಿಯ ದಳ ದೌಡು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

iStock

ಬೆಂಗಳೂರು: ಜಮ್ಮು ವಾಯುಪಡೆ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಎರಡು ಬಾರಿ ಸ್ಫೋಟದ ಸದ್ದು ಕೇಳಿಸಿದೆ.

ಶನಿವಾರ ತಡರಾತ್ರಿ ಸುಮಾರು 1.45ಕ್ಕೆ ಐದು ನಿಮಿಷಗಳ ಅಂತರದಲ್ಲಿ ಸ್ಫೋಟದ ಸದ್ದು ಕೇಳಿದ್ದು, ಒಂದು ಸ್ಫೋಟದಿಂದ ಕಟ್ಟಡವೊಂದರ ಮೇಲ್ಛಾವಣಿ ಕುಸಿದಿದ್ದರೆ, ಮತ್ತೊಂದರಿಂದ ಕಟ್ಟಡದ ನೆಲಭಾಗ ಹಾನಿಯಾಗಿದೆ.

ಸ್ಫೋಟದಿಂದ ಜೀವಹಾನಿ ಇಲ್ಲವೆ ಗಾಯಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಸ್ಫೋಟ ಸಂಭವಿಸಿದ ಜಮ್ಮು ಏರ್ ಫೋರ್ಸ್ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು, ಭದ್ರತಾ ಪಡೆಗಳ ಮುಖ್ಯಸ್ಥರು ಮತ್ತು ಬಾಂಬ್ ನಿಷ್ಕ್ರಿಯ ದಳ ಹಾಗೂ ವಿಧಿವಿಜ್ಞಾನ ಇಲಾಖೆಯ ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು