ಶುಕ್ರವಾರ, ಜುಲೈ 30, 2021
24 °C

ನಾಳೆ ವಿದ್ಯಾರ್ಥಿಗಳೊಂದಿಗೆ ಸಚಿವ ಪೋಖ್ರಿಯಾಲ್‌ ಸಂವಾದ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ ಪೋಖ್ರಿಯಾಲ್ ಅವರು ಜೂನ್ 25ರಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.

10 ಹಾಗೂ 12ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ಅವರು ಸಂಜೆ 4ಕ್ಕೆ ಉತ್ತರಿಸುವರು ಎಂದು ಮೂಲಗಳು ಹೇಳಿವೆ.

ಕೋವಿಡ್‌ ನಂತರದ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಗಾಗಿ ಅವರು ದೆಹಲಿಯ ಎಐಐಎಂಎಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಪರೀಕ್ಷೆಗೆ ಸಂಬಂಧಿಸಿದಂತೆ ಸಾಕಷ್ಟು ಜನ ವಿದ್ಯಾರ್ಥಿಗಳು ತಮ್ಮ ಆತಂಕ ವ್ಯಕ್ತಪಡಿಸಿದ್ದು, ತಮ್ಮ ಪ್ರಶ್ನೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ.  ಇನ್ನೂ ನಿಮ್ಮ ಪ್ರಶ್ನೆಗಳಿದ್ದರೆ ಟ್ವಿಟರ್‌, ಫೇಸ್‌ಬುಕ್‌ ಅಥವಾ ಇ–ಮೇಲ್‌ ಮೂಲಕ ನನ್ನ ಗಮನಕ್ಕೆ ತನ್ನಿ’  ಎಂದು ಅವರು ಸರಣಿ ಟ್ವೀಟ್‌ಗಳ ಮೂಲಕ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು