ಮಂಗಳವಾರ, ಫೆಬ್ರವರಿ 7, 2023
26 °C

ಬಿಹಾರ: ದೋಣಿ ಮಗುಚಿ 7 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕತಿಹಾರ್‌ (ಬಿಹಾರ): ಇಲ್ಲಿನ ಗಂಗಾ ಮತ್ತು ಬರಾಂಡಿ ನದಿಗಳ ಸಂಗಮ ಪ್ರದೇಶದಲ್ಲಿ ದೋಣಿ ಮಗುಚಿ ಏಳು ಮಂದಿ ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

‘10 ಮಂದಿ ಕಾರ್ಮಿಕರು ಶನಿವಾರ ಸಂಜೆ ಕೆಲಸ ಮುಗಿಸಿ ದೋಣಿಯಲ್ಲಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೂವರು ಈಜಿ ದಡ ಸೇರಿದ್ದಾರೆ’ ಎಂದೂ ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್‌ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ನದಿಯಲ್ಲಿ ನಾಪತ್ತೆಯಾದವರ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದೂ ವಿವರಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮೃತರ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು