ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಬೋಡೊಲ್ಯಾಂಡ್‌ ಪ್ರಾದೇಶಿಕ ಮಂಡಳಿ ಚುನಾವಣೆ ಆರಂಭ

Last Updated 7 ಡಿಸೆಂಬರ್ 2020, 7:24 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಬೋಡೊಲ್ಯಾಂಡ್‌ ಪ್ರಾದೇಶಿಕ ಮಂಡಳಿಗಾಗಿ (ಬಿಟಿಸಿ) ಸೋಮವಾರ ಬೆಳಿಗ್ಗೆ ಮತದಾನ ಆರಂಭವಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬಕ್ಸಾ ಮತ್ತು ಉದಲ್‌ಗುರಿ ಜಿಲ್ಲೆಯ 40 ಸ್ಥಾನಗಳ ಪೈಕಿ 21 ಸ್ಥಾನಗಳಿಗಾಗಿ ಚುನಾವಣೆ ನಡೆಯುತ್ತಿದೆ. ಸೋಮವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕೋಕ್ರಜಾರ್‌ ಮತ್ತು ಚಿರಂಗ್ ಜಿಲ್ಲೆಯ ಇತರ 19 ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ.

ಮುಂದಿನ ವರ್ಷ ನಡೆಯಲಿರುವ ಅಸ್ಸಾಂ ವಿಧಾನಸಭೆ ಚುನಾವಣೆ ದೃಷಿಯಿಂದ ಬಿಟಿಸಿ ಚುನಾವಣೆಯು ಮಹತ್ವದಾಗಿದ್ದು, ಚುನಾವಣಾ ಫಲಿತಾಂಶ ಡಿಸೆಂಬರ್‌ 12 ರಂದು ಹೊರಬೀಳಲಿದೆ.

ಬಿಜೆಪಿ ಈ ಬಾರಿಯ ಬಿಟಿಸಿ ಚುನಾವಣೆಯಲ್ಲಿ ಬೋಡೊಲ್ಯಾಂಡ್‌ ಪೀಪಲ್ಸ್‌ ಫ್ರಂಟ್‌ (ಬಿಪಿಎಫ್‌) ವಿರುದ್ಧವೇ ಸ್ಪರ್ಧಿಸುತ್ತಿದೆ. ರಾಜ್ಯಮಟ್ಟದಲ್ಲಿ ಬಿಪಿಎಫ್‌ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಆದರೆ, ಬಿಟಿಸಿ ಚುನಾವಣೆ ಬಳಿಕ ಈ ಮೈತ್ರಿ ಮುರಿದು ಬೀಳುವ ಸಾಧ್ಯತೆ ಇದೆ. ಈಗಾಗಲೇ ಇನ್ನೊಂದು ಪಕ್ಷ ಯುನೈಟೆಡ್‌ ಪೀಪಲ್ಸ್‌ ಪಾರ್ಟಿ ಲಿಬರಲ್‌ (ಯುಪಿಪಿಎಲ್‌) ಜತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮಾತುಕತೆ ನಡೆಸಿದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT