ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರವಾಹ ಪೀಡಿತ ಅಸ್ಸಾಂಗೆ ₹25 ಲಕ್ಷ ನೆರವು ನೀಡಿದ ಅಮೀರ್ ಖಾನ್: ಸಿಎಂ ಕೃತಜ್ಞತೆ

ಅಕ್ಷರ ಗಾತ್ರ

ನವದೆಹಲಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, 24.92 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇದರ ಬೆನ್ನಲ್ಲೇ ಬಾಲಿವುಡ್‌ ನಟ ಅಮೀರ್ ಖಾನ್ ಅವರು ಅಸ್ಸಾಂಗೆ ಸಹಾಯ ಹಸ್ತ ಚಾಚಿದ್ದಾರೆ.

ಅಮೀರ್ ಖಾನ್ ಅವರು ಇತ್ತೀಚೆಗೆ ಅಸ್ಸಾಂನ ಸಿಎಂ ಪರಿಹಾರ ನಿಧಿಗೆ ₹25 ಲಕ್ಷ ಧನಸಹಾಯ ಮಾಡಿದ್ದಾರೆ.

‘ಬಾಲಿವುಡ್ ನಟ ಅಮೀರ್ ಖಾನ್ ಅವರು ಸಿಎಂ ಪರಿಹಾರ ನಿಧಿಗೆ ₹25 ಲಕ್ಷ ಕೊಡುಗೆ ನೀಡುವ ಮೂಲಕ ನಮ್ಮ ರಾಜ್ಯದ ಪ್ರವಾಹ ಪೀಡಿತ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಅವರ ಕಾಳಜಿ ಮತ್ತು ಉದಾರತೆಯ ಕಾರ್ಯಕ್ಕೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್‌ಡಿಎಂಎ) ಇತ್ತೀಚಿನ ಅಂಕಿ–ಅಂಶಗಳ ಪ್ರಕಾರ, ರಾಜ್ಯದ 27 ಜಿಲ್ಲೆಗಳು ಪ್ರವಾಹಪೀಡಿತ ವಾಗಿದ್ದು, 24 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಎರಡು ವಾರಗಳಿಂದ ಪ್ರವಾಹ ಮತ್ತು ಭೂಕುಸಿತದ ಪರಿಣಾಮವಾಗಿ 555 ಪರಿಹಾರ ಶಿಬಿರಗಳಲ್ಲಿ 1.76 ಲಕ್ಷ ಮಂದಿ ಆಶ್ರಯ ಪಡೆದಿದ್ದಾರೆ.

ಪ್ರವಾಹದಿಂದಾಗಿ ಮಂಗಳವಾರವೂ ಐವರು ಸಾವಿಗೀಡಾಗಿದ್ದು, ಪ್ರವಾಹ ಮತ್ತು ಭೂಕುಸಿತದಿಂದಾಗಿ ರಾಜ್ಯದಲ್ಲಿ ಈ ವರ್ಷದ ಸಾವಿಗೀಡಾದವರ ಸಂಖ್ಯೆ 139ಕ್ಕೆ ಏರಿದೆ.

ಅಮೀರ್ ಖಾನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಿಂಗ್ ಚಡ್ಡಾ’ ಬಿಡುಗಡೆಗೆ ಸಜ್ಜಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT