ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿತಿಂಗಳು ನಡೆಸಿಕೊಡುವ ಮನ್ ಕೀ ಬಾತ್ (ಮನದ ಮಾತು) ಕಾರ್ಯಕ್ರಮದಲ್ಲಿ, ‘ದೇಶದ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಾಗುತ್ತಿದೆ’ ಎಂದು ಶ್ಲಾಘಿಸಿದ್ದರು. ಈ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಸಾಧನೆಗಳ ಬಿಂಬಿಸುವ ಚಿತ್ರಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಭಾರತ ನಮ್ಮ ನಾರೀ ಶಕ್ತಿಗೆ ನಮಿಸುತ್ತದೆ’ ಎಂದು ಬರೆದುಕೊಂಡಿದ್ದರು. ಈ ಟ್ವೀಟ್ ಅನ್ನು ಪಡುಕೋಣೆ ರೀಟ್ವೀಟ್ ಮಾಡಿಕೊಂಡಿದ್ದಾರೆ. ಅದರೊಟ್ಟಿಗೆ, ‘ನೀವು ಜಗತ್ತಿನಲ್ಲಿ ಕಾಣಬಯಸುವ ಬದಲಾವಣೆಯನ್ನು ನಿಮ್ಮಲ್ಲಿ ತಂದುಕೊಳ್ಳಿ’ ಎಂಬ ಮಹಾತ್ಮಾ ಗಾಂಧಿಯವರ ಮಾತನ್ನು ಉಲ್ಲೇಖಿಸಿ, ಈ ಪದಗಳು ಈ ಅಸಾಮಾನ್ಯ ಮಹಿಳೆಯರು ಮತ್ತು ಪ್ರಪಂಚದಾದ್ಯಂತ ಇರುವ ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ನಿಜವಾಗಲಾರವು! ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ಮನದ ಮಾತು ಸರಣಿಯ 73ನೇ ಹಾಗೂ ಈ ವರ್ಷದ ಮೊದಲ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ್ದರು. ಈ ವೇಳೆ ವಿವಿಧ ಇಲಾಖೆಗಳು, ದೇಶದ ಪ್ರಮುಖ ವಿಚಾರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿರುವುದನ್ನು ಒತ್ತಿಹೇಳಿದ್ದರು.

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ನಾಲ್ವರು ಮಹಿಳಾ ಪೈಲಟ್ಳು, ಸ್ಯಾನ್ ಫ್ರಾನ್ಸಿಸ್ಕೊ-ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣವಾಗಿ ಕ್ರಮಿಸಿ ಇತಿಹಾಸ ನಿರ್ಮಿಸಿದ್ದರು. ಈ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.