ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬ್‌ ಸ್ಫೋಟ: ಸಿಐಡಿಯಿಂದ ಬಾಂಗ್ಲಾದೇಶ ಪ್ರಜೆ ಬಂಧನ

Last Updated 24 ಫೆಬ್ರುವರಿ 2021, 9:22 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ನಿಮ್ತಿತಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ’ ಎಂದು ಸಿಐಡಿಯ ಹಿರಿಯ ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.

ಈ ಘಟನೆಯಲ್ಲಿ ಕಾರ್ಮಿಕ ಸಚಿವ ಜಾಕೀರ್‌ ಹುಸೇನ್ ಅವರು ಫೆ. 17ರಂದು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ನಂ. 2ರಲ್ಲಿ ಕೋಲ್ಕತ್ತಕ್ಕೆ ಹೋಗುವ ರೈಲಿಗಾಗಿ ಕಾಯುತ್ತಿದ್ದಾಗ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಸಚಿವ ಹುಸೇನ್‌ ಹಾಗೂ ಇತರ 20ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT