ಶನಿವಾರ, ಜುಲೈ 2, 2022
22 °C

ಜಮ್ಮು–ಕಾಶ್ಮೀರ: ಸಿಆರ್‌ಪಿಎಫ್‌ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು–ಕಾಶ್ಮೀರದ ಸೋಪೋರೆಯಲ್ಲಿ ಮಂಗಳವಾರ ಬುರ್ಖಾಧಾರಿ ಮಹಿಳೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಬಂಕರ್ ಮೇಲೆ ಬಾಂಬ್ ಎಸೆದು ಪರಾರಿಯಾಗಿದ್ದಾಳೆ ಎಂದು ವರದಿಯಾಗಿದೆ.

ಮಹಿಳೆ ಬಾಂಬ್ ಎಸೆದಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಯೊಂದನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

‘ಸೋಪೋರೆಯಲ್ಲಿ ಸಿಆರ್‌ಪಿಎಫ್‌ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ ಯಾರು ಎಂಬುದನ್ನು ಕಂಡುಹಿಡಿಯಲಾಗಿದೆ. ಆಕೆಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು