ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ

Last Updated 15 ಜನವರಿ 2022, 3:56 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಘಾಜಿಪುರ್‌ನ ಹೂವಿನ ಮಾರುಕಟ್ಟೆಯಲ್ಲಿ, ಸುಧಾರಿತ ಸ್ಫೋಟಕ ಪರಿಕರಗಳಿದ್ದ (ಐಇಡಿ) ಬ್ಯಾಗ್‌ ಪತ್ತೆಯಾಗಿದೆ. ಬಳಿಕ ಅದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿರುವಾಗಲೇ ಈ ಬೆಳವಣಿಗೆ ನಡೆದಿದೆ. ಇದರ ಬೆನ್ನಲ್ಲೇ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಶಂಕಾಸ್ಪದ ಪರಿಕರಗಳ ಬ್ಯಾಗ್ ಇರುವ ಬಗ್ಗೆ ಮಾಹಿತಿ ಬಂದಿತು. ಸ್ಥಳಕ್ಕೆ ದೆಹಲಿ ಪೊಲೀಸ್‌ನ ವಿಶೇಷ ದಳ, ಎನ್‌ಎಸ್‌ಜಿ ಬಾಂಬ್ ನಿಷ್ಕ್ರಿಯ ದಳ, ಅಗ್ನಿಶಾಮಕ ಸೇವೆಯ ಸಿಬ್ಬಂದಿ ಧಾವಿಸಿದ್ದರು.ಕಪ್ಪು ಬಣ್ಣದ ಬ್ಯಾಗ್ ಸುಮಾರು 3 ಕೆ.ಜಿ ತೂಕವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT