ಭಾನುವಾರ, ಜೂನ್ 26, 2022
29 °C

ಅಮರಾವತಿ ಸಂಸದೆಯ ಜಾತಿ ಪ್ರಮಾಣಪತ್ರ ರದ್ದುಪಡಿಸಿದ ಬಾಂಬೆ ಹೈಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಅಮರಾವತಿ ಲೋಕಸಭಾ ಕ್ಷೇತ್ರದ ಸದಸ್ಯೆ ನವನೀತ್ ಕೌರ್ ರಾಣಾ ಅವರಿಗೆ ನೀಡಿರುವ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಬಾಂಬೆ ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.

ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ವಿ.ಜಿ. ಬಿಶ್ತ್ ಅವರಿದ್ದ ವಿಭಾಗೀಯ ಪೀಠವು ಈ ತೀರ್ಪು ನೀಡಿದ್ದು, ₹2 ಲಕ್ಷ ವೆಚ್ಚವನ್ನು ಮಹಾರಾಷ್ಟ್ರ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಎರಡು ವಾರಗಳ ಒಳಗೆ ಪಾವತಿಸುವಂತೆ ಆದೇಶಿಸಿದೆ.

‘ಮೋಚಿ’ ಜಾತಿಗೆ ಸೇರಿದ ರಾಣಾ ಅವರು ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಲಭ್ಯವಿರುವ ವಿವಿಧ ಪ್ರಯೋಜನಗಳನ್ನು ಪಡೆಯುವ ಉದ್ದೇಶದಿಂದ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಮೋಸದಿಂದ ಪಡೆದುಕೊಂಡಿರುವುದನ್ನು ಹೈಕೋರ್ಟ್ ಗಮನಿಸಿದೆ.

ರಾಣಾ ಅವರು 2019ರಲ್ಲಿ ಮಹಾರಾಷ್ಟ್ರದ ಅಮರಾವತಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು