ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರುಣ್ ತೇಜ್‌ಪಾಲ್ ಪ್ರಕರಣ: ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

Last Updated 20 ಸೆಪ್ಟೆಂಬರ್ 2021, 7:31 IST
ಅಕ್ಷರ ಗಾತ್ರ

ಪಣಜಿ: 2013 ರ ಅತ್ಯಾಚಾರ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಅಕ್ಟೋಬರ್ 27 ರಂದು ಕೈಗೆತ್ತಿಕೊಳ್ಳುವುದಾಗಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಸೋಮವಾರ ಹೇಳಿದೆ.

ಗೋವಾ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಮತ್ತು ತೇಜ್‌ಪಾಲ್ ಪರ ವಕೀಲರು ಮುಂದಿನ ವಿಚಾರಣೆಯ ದಿನಾಂಕವನ್ನು ತಿಳಿಸುವಂತೆ ನ್ಯಾಯಮೂರ್ತಿಗಳಾದ ಎಂ ಎಸ್ ಸೋನಾಕ್ ಮತ್ತು ಎಂ ಎಸ್ ಜಾವಲ್ಕರ್ ಅವರ ಪೀಠವನ್ನು ಕೇಳಿದರು. ಅರ್ಜಿ ಕೈಗೆತ್ತಿಕೊಂಡ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 27 ಕ್ಕೆ ಮುಂದೂಡಿತು.

ನ್ಯಾಮೂರ್ತಿ ಸೊನಾಕ್‌ ಅವರು, ’ಈ ಪ್ರಕರಣದ ಮಂದಿನ ವಿಚಾರಣೆಯನ್ನು ವರ್ಚುವಲ್‌ ಮೂಲಕ ನಡೆಸಲು ನ್ಯಾಯಾಲಯ ಸೌಲಭ್ಯ ಕಲ್ಪಿಸಲಿದೆ. ಅಂದಿನ ನ್ಯಾಯಾಲಯದ ಕಲಾಪದಲ್ಲಿ ಗೋವಾ ಸರ್ಕಾರದ ಪರವಾಗಿ ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದೆಹಲಿಯಿಂದ ಪಾಲ್ಗೊಳ್ಳಲಿದ್ದಾರೆ‘ ಎಂದು ಹೇಳಿದರು.

ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸುವುದರ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ವನವಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 20 ಕ್ಕೆ ಮುಂದೂಡಿತ್ತು. ಮುಖ್ಯ ನ್ಯಾಯಮೂರ್ತಿಯವರ ಕೋರಿಕೆಯ ಮೇರೆಗೆ ಸೋಮವಾರ ಭೌತಿಕವಾಗಿ ಮತ್ತು ವರ್ಚುವಲ್ ಆಗಿ ಕೂಡ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಆಗಸ್ಟ್‌ ತಿಂಗಳಲ್ಲಿ ಈ ಪ್ರಕರಣದ ವಿಚಾರಣೆಯನ್ನು ‘ಗೌಪ್ಯವಾಗಿ‘ ನಡೆಸಬೇಕೆಂದು ಪತ್ರಕರ್ತ ತರುಣ್ ತೇಜ್‌ಪಾಲ್ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಈ ಮನವಿಗೆ ಗೋವಾ ಸರ್ಕಾರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿರೋಧ ವ್ಯಕ್ತಪಡಿಸಿದ್ದರು.

2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್‌ನ ಲಿಫ್ಟ್‌ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ತರುಣ್ ತೇಜ್‌ಪಾಲ್‌ ಎದುರಿಸುತ್ತಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಗೋವಾದ ಸೆಷನ್ಸ್‌ ನ್ಯಾಯಾಲಯ ಮೇ 21ರಂದು ಎಲ್ಲ ಲೈಂಗಿಕ ದೌರ್ಜನ್ಯ ಆರೋಪಗಳಿಂದ ತರುಣ್ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT