ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮನೆ ಮೇಲೆ ಬಾಂಬ್ ಎಸೆತ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಮನೆಯ ಮೇಲೆ ಇಂದು ಬೆಳಿಗ್ಗೆ 9 ಗಂಟೆಗೆ ಬಾಂಬ್ ಎಸೆಯಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದ್ದು, ಪೊಲೀಸರು ಆ ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಸೆಪ್ಟೆಂಬರ್ 8ರಂದು ಅವರ ಮನೆ ಮೇಲೆ ನಡೆದಿದ್ದ ಇದೇ ರೀತಿಯ ಕಚ್ಚಾ ಬಾಂಬ್‌ ದಾಳಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆಗೆ ಆದೇಶಿಸಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಈ ದಾಳಿಯ ಹಿಂದೆ ತೃಣಮೂಲ ಕಾಂಗ್ರೆಸ್ ರಕ್ಷಣೆಯಲ್ಲಿರುವ ಗೂಂಡಾಗಳ ಕೈವಾಡವಿದೆ ಎಂದು ಸಿಂಗ್ ಆರೋಪಿಸಿದ್ದಾರೆ. ಟಿಎಂಸಿ ಗೂಂಡಾಗಳಿಗೆ ಆಶ್ರಯ ನೀಡುತ್ತಿದೆ, ಆದ್ದರಿಂದಲೇ ಪದೇ ಪದೇ ದಾಳಿಗಳು ನಡೆಯುತ್ತಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಆಡಳಿತಾರೂಢ ಟಿಎಂಸಿಯ ಸದಸ್ಯರು ನನ್ನ ಜೀವ ತೆಗೆಯಲು ಪ್ರಯತ್ನಿಸುತ್ತಿದ್ದಾರೆ ಎಂದೂ ಅವರು ಆರೋಪ ಮಾಡಿದ್ದಾರೆ.

‘ಇದೊಂದು ಯೋಜಿತ ದಾಳಿಯಲ್ಲದೆ ಮತ್ತೇನೂ ಅಲ್ಲ. ಇದರ ಹಿಂದೆ ಟಿಎಂಸಿ ಇದೆ ... ಅವರು ನನ್ನನ್ನು ಮತ್ತು ನನ್ನ ಜನರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದು ಬಂಗಾಳದ ಗೂಂಡಾರಾಜ್’ ಎಂದು ಸಿಂಗ್ ಟೀಕಿಸಿದ್ದಾರೆ.

ಟಿಎಂಸಿ ಮುಖಂಡ ಪಾರ್ಥ ಭೌಮಿಕ್ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು