ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ಸಂಬಂಧ ವೃದ್ಧಿಗಾಗಿ ಮಂಗೋಲಿಯಾ, ಜಪಾನ್‌ಗೆ ರಾಜನಾಥ್‌ ಸಿಂಗ್‌ ಭೇಟಿ

Last Updated 4 ಸೆಪ್ಟೆಂಬರ್ 2022, 11:06 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರದಿಂದ ಐದು ದಿನಗಳ ಕಾಲ ಮಂಗೋಲಿಯಾ ಮತ್ತು ಜಪಾನ್‌ಗೆ ಭೇಟಿ ನೀಡಲಿದ್ದಾರೆ.ಉಭಯ ದೇಶಗಳೊಂದಿಗೆ ಭಾರತದ ಕಾರ್ಯತಂತ್ರ ಮತ್ತು ರಕ್ಷಣಾ ಸಂಬಂಧಗಳನ್ನು ವಿಸ್ತರಿಸುವ ಉದ್ದೇಶದಿಂದ ಈ ಪ್ರವಾಸ ಕೈಗೊಂಡಿದ್ದಾರೆ.

ಸೆಪ್ಟೆಂಬರ್ 5 ರಿಂದ 7ರ ವರೆಗೆ ಸಿಂಗ್ ಅವರು ಮಂಗೋಲಿಯಾ ದೇಶಕ್ಕೆ ಭೇಟಿ ನೀಡಲಿದ್ದಾರೆ. ಭಾರತದ ರಕ್ಷಣಾ ಸಚಿವರೊಬ್ಬರು ಪೂರ್ವ ಏಷ್ಯಾಕ್ಕೆ ಕೈಗೊಂಡಿರುವ ಮೊಟ್ಟ ಮೊದಲ ಪ್ರವಾಸ ಇದಾಗಿದೆ.

ಸೆ.8 ಮತ್ತು 9ರಂದು ರಾಜನಾಥ್‌ ಸಿಂಗ್‌ ಜಪಾನ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಿಂಗ್‌ ಮತ್ತು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಜಪಾನ್‌ ರಕ್ಷಣಾ ಮತ್ತು ವಿದೇಶಾಂಗ ಸಚಿವರೊಂದಿಗೆ 2+2 ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರು ಭಾರತಕ್ಕೆ ಭೇಟಿ ನೀಡಿದ ಐದು ತಿಂಗಳ ಬೆನ್ನಲ್ಲೇ 2+2 ಸಭೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT