ಜಿ7 ಶೃಂಗಸಭೆ| ಭಾರತಕ್ಕೆ ಆಹ್ವಾನ, ಮೋದಿಗೆ ಕರೆ ಮಾಡಿದ ಬ್ರಿಟನ್ ಪ್ರಧಾನಿ

ಲಂಡನ್: ಬ್ರಿಟನ್‌ನ ಕರಾವಳಿ ತೀರದ ಕಾರ್ನ್‌ವಾಲ್ ಪ್ರದೇಶದಲ್ಲಿ ಜೂನ್ 11 ಮತ್ತು 13ರಂದು ನಡೆಯಲಿರುವ ಜಿ 7 ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ.
ಬಹುಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸುವಂತೆ ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾದ ಜೊತೆಗೆ ಭಾರತವನ್ನು ಕಳೆದ ವರ್ಷವೇ ಆಹ್ವಾನಿಸಲಾಗಿತ್ತು. ಈ ಸಂಬಂಧ, ಬ್ರಿಟನ್‌ನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್ ಕರೆ ಮೂಲಕ ಆಹ್ವಾನ ನೀಡಿದ್ದರು. ಭಾನುವಾರ ಔಪಚಾರಿಕವಾಗಿ ಆಹ್ವಾನಿಸಲಾಗಿದೆ.
ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಾನ್ಸನ್ ಅವರ ಭಾರತ ಭೇಟಿ ನಿಗದಿಯಾಗಿತ್ತು. ಆದರೆ, ಕೊರೊನಾ ಬಿಕ್ಕಟ್ಟಿನಿಂದಾಗಿ ಅದನ್ನು ರದ್ದುಗೊಳಿಸಲಾಗಿದೆ. ಜಿ 7 ದೇಶಗಳ ಶೃಂಗಸಭೆಗೂ ಮೊದಲು ಭಾರತಕ್ಕೆ ಭೇಟಿ ನೀಡುವ ಯೋಜನೆಯನ್ನು ಜಾನ್ಸನ್ ಇದೇ ವೇಳೆ ಪುನರುಚ್ಚರಿಸಿದರು.
ಈ ಬಾರಿಯ ಶೃಂಗಸಭೆಯಲ್ಲಿ ಕೊರೊನಾ ಸಂದಿಗ್ಧ ಪರಿಸ್ಥಿತಿಯ ಕುರಿತು ಹೆಚ್ಚಿನ ಚರ್ಚೆ ನಡೆಯುವ ಸಾಧ್ಯತೆಯಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.