ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಭಯ ಸದನಗಳಲ್ಲಿ ನಿಲ್ಲದ ಅದಾನಿ ಕದನ: ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂದೂಡಿಕೆ

ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಿಕೆ
Last Updated 28 ಮಾರ್ಚ್ 2023, 6:18 IST
ಅಕ್ಷರ ಗಾತ್ರ

ನವದೆಹಲಿ: ಅದಾನಿ ವಿವಾದ ಸಂಬಂಧ ಮಂಗಳವಾರವೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.

ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಮಂಗಳವಾರವೂ ಕಪ್ಪು ದಿರಿಸು ಧರಿಸಿಕೊಂಡು ಬಂದಿದ್ದ ವಿಪಕ್ಷಗಳ ಸದಸ್ಯರು, ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ, ಸದನದ ಬಾವಿಗೆ ಇಳಿದು ಘೋಷಣೆ ಮೊಳಗಿಸಿದರು.

ಕೆಲ ಸದಸ್ಯರು ಕಾಗದ ಪತ್ರಗಳನ್ನು ಸ್ಪೀಕರ್‌ ಕುರ್ಚಿಯತ್ತ ತೂರಿದರು. ಪರಿಣಾಮ ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಬೇಕಾಯಿತು.

ರಾಜ್ಯಸಭೆಯಲ್ಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಅದಾನಿ ಪ್ರಕರಣ ಸಂಬಂಧ ಜಂಟಿ ಸದನ ಸಮಿತಿ ರಚನೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು. ಕಲಾಪ ಮುಂದುವರಿಸಲಾಗದೆ 2 ಗಂಟೆಗೆ ಮುಂದೂಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT