ಭಾನುವಾರ, ಮಾರ್ಚ್ 7, 2021
32 °C

ಬೀಡಿ ತರಲು ತಡ ಮಾಡಿದ್ದಕ್ಕೆ ಮಗನಿಗೆ ಬೆಂಕಿ ಹಚ್ಚಿದ ತಂದೆ!

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ‘ಅಂಗಡಿಯಿಂದ ಬೀಡಿ ತರಲು ತಡಮಾಡಿದ ಎಂದು ವ್ಯಕ್ತಿಯೊಬ್ಬ 10 ವರ್ಷದ ಮಗನಿಗೆ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ’ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. 

‘ಮಗ ಸರಿಯಾಗಿ ಓದುತ್ತಿಲ್ಲ ಎಂಬ ಕೋಪವೂ ಆ ವ್ಯಕ್ತಿಗಿತ್ತು. 17ರ ರಾತ್ರಿ ಮಗನ ಮೇಲೆ ಟರ್ಪೆಂಟೈನ್‌ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಆಸ್ಪತ್ರೆಗೆ ಸೇರಿಸಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ವ್ಯಕ್ತಿಯು ಮದ್ಯ ವ್ಯಸನಿಯಾಗಿದ್ದ ಎಂಬುದು ತಿಳಿದುಬಂದಿದೆ. ಆತನನ್ನು ಬಂಧಿಸಿದ್ದು, ಸದ್ಯ ಜೈಲಿನಲ್ಲಿದ್ದಾನೆ’ ಎಂದೂ ಪೊಲೀಸರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು