ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಪಡೆದಿದ್ದರೂ ಶೇ. 25ರಷ್ಟು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಸೋಂಕು: ಅಧ್ಯಯನ

Last Updated 31 ಆಗಸ್ಟ್ 2021, 15:02 IST
ಅಕ್ಷರ ಗಾತ್ರ

ನವದೆಹಲಿ: ಲಸಿಕೆ ಹಾಕಿಸಿಕೊಂಡಿದ್ದರೂ ಶೇ 25ಕ್ಕಿಂತಲೂ ಹೆಚ್ಚು ಆರೋಗ್ಯ ಕಾರ್ಯಕರ್ತರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಇದಕ್ಕೆ ಡೆಲ್ಟಾ ತಳಿಯೇ ಕಾರಣ ಎನ್ನುವುದನ್ನು ಇತ್ತೀಚಿನ ಅಧ್ಯಯನ ಬಹಿರಂಗಪಡಿಸಿದೆ.

ನವದೆಹಲಿಯಲ್ಲಿ ಡೆಲ್ಟಾ ತಳಿಯ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾದ ಸಂದರ್ಭದಲ್ಲಿ ಇನ್ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಅಂಡ್ ಇಂಟಿಗ್ರೇಟಿವ್ ಬಯಾಲಜಿ (ಐಜಿಐಬಿ) ಮತ್ತು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗಳು ಜಂಟಿಯಾಗಿ ಈ ಅಧ್ಯಯನ ನಡೆಸಿವೆ.

ಐಜಿಐಬಿಯ ಹಿರಿಯ ವಿಜ್ಞಾನಿ ಮತ್ತು ಅಧ್ಯಯನದ ಪ್ರಮುಖ ಸಂಶೋಧಕರಲ್ಲಿ ಒಬ್ಬರಾದ ಶಾಂತನು ಸೇನ್‌ಗುಪ್ತಾ ಅವರು ‘ಸೋಂಕಿನ ತೀವ್ರತೆಯು ಕಡಿಮೆಯಾಗಿತ್ತು. ಅಲ್ಲದೇ ತೀವ್ರತರದ ಕಾಯಿಲೆಗಳನ್ನು ತಪ್ಪಿಸಲು ಲಸಿಕೆ ನಿರ್ಣಾಯಕ ಎನ್ನುವುದು ಈ ಅಧ್ಯಯನದಲ್ಲಿ ಕಂಡುಬಂದಿದೆ’ ಎಂದು ಹೇಳಿದ್ದಾರೆ.

‘ಎರಡು ಡೋಸ್ ಲಸಿಕೆ ತೆಗೆದುಕೊಂಡ 95 ಆರೋಗ್ಯ ಕಾರ್ಯಕರ್ತರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. 25ರಷ್ಟು ಸೋಂಕಿತರ ಪೈಕಿ ಹೆಚ್ಚಿನವರಲ್ಲಿ ರೋಗದ ಲಕ್ಷಣಗಳೇ ಇರಲಿಲ್ಲ. ಸೋಂಕು ಹರಡುವಿಕೆ ತಡೆಗಟ್ಟಲು ಮಾಸ್ಕ್‌ ಧರಿಸುವುದು ಬಹಳ ಮುಖ್ಯ’ ಎಂದು ಸೇನ್‌ಗುಪ್ತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT