ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಂಗಾಂಗ್ ಸರೋವರಕ್ಕೆ ಚೀನಾ ಸೇತುವೆ ನಿರ್ಮಿಸುತ್ತಿರುವುದು ಅಕ್ರಮ: ಭಾರತ

Last Updated 20 ಮೇ 2022, 16:00 IST
ಅಕ್ಷರ ಗಾತ್ರ

ನವದೆಹಲಿ: ಪಾಂಗಾಂಗ್ ಸರೋವರಕ್ಕೆ ಚೀನಾ ನಿರ್ಮಿಸುತ್ತಿರುವ ಎರಡನೇ ಸೇತುವೆ 1960ರಿಂದಲೂ ಆ ದೇಶ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಭಾರತ ಶುಕ್ರವಾರ ಹೇಳಿದೆ.

ಅಂಥ ಅತಿಕ್ರಮಣವನ್ನು ಭಾರತ ಎಂದಿಗೂ ಒಪ್ಪುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಹೇಳಿದ್ದಾರೆ.

ಮಾಧ್ಯಮ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ಪಾಂಗಾಂಗ್ ಸರೋವರಕ್ಕೆ ಚೀನಾ ಈ ಮೊದಲಿನ ಸೇತುವೆ ಬಳಿ ಮತ್ತೊಂದು ಸೇತುವೆ ನಿರ್ಮಿಸುತ್ತಿರುವ ಬಗ್ಗೆ ವರದಿಗಳನ್ನು ನೋಡಿದ್ದೇವೆ. ಈ ಎರಡೂ ಸೇತುವೆಗಳು ಅಕ್ರಮ. 1960ರಿಂದಲೂ ಚೀನಾ ಅತಿಕ್ರಮಿಸಿರುವ ಪ್ರದೇಶದಲ್ಲೇ ಬರುತ್ತದೆ’ ಎಂದು ಅವರು ಹೇಳಿದ್ದಾರೆ.

‘ನಮ್ಮ ಭೂ ಪ್ರದೇಶದಲ್ಲಿ ಅಂಥ ಅಕ್ರಮ ನಿರ್ಮಾಣವನ್ನು ನಾವು ಒಪ್ಪುವುದಿಲ್ಲ. ನ್ಯಾಯಸಮ್ಮತವಲ್ಲದ ಚೀನಾದ ಪ್ರತಿಪಾದನೆಯನ್ನು ಒಪ್ಪಲಾಗದು’ ಎಂದು ಅವರು ಹೇಳಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ, ಲಡಾಖ್‌ ಭಾರತದ ಅವಿಭಾಜ್ಯ ಅಂಗ ಎಂದು ಹಲವು ಬಾರಿ ನಾವು ಸ್ಪಷ್ಟಪಡಿಸಿದ್ದೇವೆ. ನಮ್ಮ ದೇಶದ ಸಾರ್ವಭೌಮತ್ವವನ್ನು, ಭೌಗೋಳಿಕ ಸಮಗ್ರತೆಯನ್ನು ಇತರ ರಾಷ್ಟ್ರಗಳು ಗೌರವಿಸಬೇಕು ಎಂಬುದನ್ನು ನಾವು ಬಯಸುತ್ತೇವೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT