ಮಂಗಳವಾರ, ಮಾರ್ಚ್ 21, 2023
25 °C

ಲಖಿಂಪುರ ಖೇರಿ ಪ್ರಕರಣ: ಸಾಕ್ಷಿದಾರ ಸಹೋದರನ ಮೇಲೆ ಹಲ್ಲೆ

ಪಿಟಿಐ Updated:

ಅಕ್ಷರ ಗಾತ್ರ : | |

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ನಡೆದ ಹಿಂಸಾಚಾರ ಕೃತ್ಯದ ಸಾಕ್ಷಿದಾರ ವ್ಯಕ್ತಿಯ ಸಹೋದರನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸರ್ವಜಿತ್ ಸಿಂಗ್ ಮೇಲೆ ಶುಕ್ರವಾರ ರಾತ್ರಿ ಹಲ್ಲೆ ನಡೆದಿದ್ದು, ಗಾಯಗೊಂಡಿದ್ದಾರೆ. ಈತ ಲಖಿಂಪುರ ಖೀರಿಯಲ್ಲಿ 2021ರ ಅಕ್ಟೋಬರ್‌ 3ರಂದು ನಡೆದ ಹಿಂಸಾಚಾರದ ಘಟನೆಗೆ ಸಾಕ್ಷಿಯಾಗಿರುವ ಪ್ರಭಜಿತ್ ಸಿಂಗ್ ಅವರ ಸಹೋದರ.

ತಿಕುನಿಯಾ ನಗರದಲ್ಲಿ ಸ್ನೇಹಿತರು ಆಯೋಜಿಸಿದ್ದ ಔತಣಕೂಟಕ್ಕೆ ಹೋಗಿದ್ದಾಗ, ಹಿಂಸಾಚಾರದ ಆರೋಪಿ ವಿಕಾಸ್‌ ಚಾವ್ಲಾ ಮತ್ತು ಆತನ ಸಹಚರರು ನಿಂದಿಸಿ, ಹರಿತ ಆಯುಧಗಳಿಂದ ಹಲ್ಲೆ ನಡೆಸಿದರು ಎಂದು ಸರ್ವಜಿತ್ ಸಿಂಗ್‌ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಹಲ್ಲೆಗೂ 2021ರಲ್ಲಿ ನಡೆದ ಹಿಂಸಾಚಾರಕ್ಕೂ ಸಂಬಂಧವಿಲ್ಲವೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.  

ಲಖಿಂಪುರ ಖೀರಿ ಹಿಂಸಾಚಾರದಲ್ಲಿ ನಾಲ್ವರು ರೈತರು, ಒಬ್ಬ ಪತ್ರಕರ್ತ, ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಚಾಲಕ ಸೇರಿ ಎಂಟು ಮಂದಿ ಮೃತಪಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು