ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಪಕ್ಷದ ಶಾಸಕಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) 8 ಗಂಟೆ ತನಿಖೆಗೆ ಒಳಪಡಿಸಿದೆ.
ಅಬಕಾರಿ ಹಗರಣದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಮುಂದಿಟ್ಟುಕೊಂಡು ಕವಿತಾ ವಿಚಾರಣೆ ನಡೆಸಲಾಗಿದೆ.
ಕವಿತಾ ತನಿಖೆ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿದ್ದರಿಂದ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿತ್ತು. ಬೆಳಿಗ್ಗೆ 11.15ರ ಸುಮಾರಿಗೆ ಅವರು ತನಿಖೆಗೆ ಹಾಜರಾಗಿದ್ದರು.
ಪ್ರಕರಣದಲ್ಲಿ ಎಎಪಿ ಸರ್ಕಾರಕ್ಕೆ ₹100 ಕೋಟಿ ಲಂಚ ನೀಡಿದೆ ಎನ್ನಲಾದ ಸೌತ್ ಗ್ರೂಪ್‌ನ ಬಂಧಿತ ಆರೋಪಿ ಹಾಗೂ ಇ.ಡಿ ವಶದಲ್ಲಿರುವ ಅರುಣ್ ರಾಮಚಂದ್ರನ್ ಪಿಳ್ಳೆ ಅವರ ಎದುರೇ ಕವಿತಾ ವಿಚಾರಣೆ ನಡೆಸಲಾಗಿದೆ.
ರಾತ್ರಿ 8 ಗಂಟೆ ಸುಮಾರಿಗೆ ಕವಿತಾ ಇ.ಡಿ ಕಚೇರಿಯಿಂದ ಹೊರಬಂದಿದ್ದಾರೆ.
ಇ.ಡಿ ಪ್ರಕಾರ, 'ಸೌತ್ ಗ್ರೂಪ್' ಎಂಬುದು ಕವಿತಾ, ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ರೆಡ್ಡಿ, ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮತ್ತು ಇತರರೊಂದಿಗೆ ಸಂಪರ್ಕ ಹೊಂದಿದ ಮದ್ಯದ ಕಾರ್ಟೆಲ್ ಆಗಿದೆ. ಪಿಳ್ಳೈ ಅವರು ಕವಿತಾ ಅವರ ಬೇನಾಮಿ ಹೂಡಿಕೆಗಳನ್ನು ಪ್ರತಿನಿಧಿಸುತ್ತಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.