ಮಂಗಳವಾರ, ಆಗಸ್ಟ್ 9, 2022
23 °C

ಸರಕು ಕಳ್ಳಸಾಗಣೆಗೆ ಯತ್ನ: ಬಾಂಗ್ಲಾ ಪ್ರಜೆ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶಿಲ್ಲಾಂಗ್‌: ಮೇಘಾಲಯದ ಪೂರ್ವ ಖಾಸಿ ಹಿಲ್ಸ್‌ ಜಿಲ್ಲೆಯಲ್ಲಿ ಸರಕುಗಳ ಕಳ್ಳ ಸಾಗಣೆಗೆ ಪ್ರಯತ್ನಿಸುತ್ತಿದ್ದ ಫಿರೋಜ್‌ ಅಲಿ ಎಂಬ ಬಾಂಗ್ಲಾದೇಶದ ಪ್ರಜೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಸಿಬ್ಬಂದಿ ಬಂಧಿಸಿದ್ದಾರೆ ಎಂದು ಬಿಎಸ್‌ಎಫ್‌ ವಕ್ತಾರರು ತಿಳಿಸಿದ್ದಾರೆ.

‘ಕಳ್ಳಸಾಗಣೆಯ ಬಗ್ಗೆ ಸಿಕ್ಕ ಖಚಿತ ಮಾಹಿತಿಗಳ ಆಧಾರದ ಮೇಲೆ, ಪಿರಿದಿವಾ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಬಿಎಸ್‌ಎಫ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಸದ್ಯ ಬಂಧಿತ ಆರೋಪಿಯಿಂದ ₹20 ಲಕ್ಷ ಮೌಲ್ಯದ ಔಷಧಗಳು, ಸೌಂದರ್ಯ ವರ್ಧಕಗಳು, ಹಾಗೂ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ಜಿಲ್ಲಾ ಪೊಲೀಸರಿಗೆ ಒಪ್ಪಿಸಲಾಗಿದೆ’ ಎಂದು ವಕ್ತಾರರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು