ಗಣರಾಜ್ಯೋತ್ಸವ: ಗಡಿಯಲ್ಲಿ ಕಟ್ಟೆಚ್ಚರಕ್ಕೆ ಬಿಎಸ್‌ಎಫ್ ತಾಲೀಮು

ಅಹಮದಾಬಾದ್: ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಭಾರತ–ಪಾಕಿಸ್ತಾನ ಗಡಿಯಲ್ಲಿ ಭದ್ರತೆ ಹೆಚ್ಚಿಸಲು ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಗುಜರಾತ್‌ನ ಕಛ್ ಜಿಲ್ಲೆಯಲ್ಲಿ ಮತ್ತು ರಾಜಸ್ಥಾನದ ಬಾರ್ಮರ್‌ನಲ್ಲಿ ‘ಆಪರೇಷನ್ ಅಲರ್ಟ್’ ತಾಲೀಮು ಆರಂಭಿಸಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ.
‘ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಈ ತಾಲೀಮನ್ನು ಆರಂಭಿಸಲಾಗಿದೆ. ಇದು ಜನವರಿ 21ರಂದು ಆರಂಭವಾಗಿದ್ದು, 28ರ ವರೆಗೆ ಭಾರತ–ಪಾಕಿಸ್ತಾನ ನಡುವಿನ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ನಡೆಯಲಿದೆ’ ಎಂದು ಬಿಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ.
ಈ ತಾಲೀಮಿನ ಅಂಗವಾಗಿ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದೂ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.