ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

Last Updated 9 ಫೆಬ್ರುವರಿ 2022, 7:11 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ್ದು, ಮಾದಕ ದ್ರವ್ಯ ಹಾಗೂ ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ಬುಧವಾರತಿಳಿಸಿದ್ದಾರೆ.

ಗುರುದಾಸ್‌ಪುರ ಸೆಕ್ಟರ್‌ನ ಪಂಜ್‌ಗ್ರೇನ್ ಪ್ರದೇಶದಲ್ಲಿ ಮಧ್ಯರಾತ್ರಿ ಅನುಮಾನಸ್ಪದ ವಸ್ತುವನ್ನು ಪತ್ತೆ ಹಚ್ಚಿದ ಬಿಎಸ್‌ಎಫ್, ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿತ್ತು.

ಬಳಿಕ ಗಗ್ಗರ್ ಹಾಗೂ ಸಿಂಘೊಕೆ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಹಳದಿ ಬಣ್ಣದ ಎರಡು ಪ್ಯಾಕೆಟ್‌‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಡ್ರೋನ್ ಮೂಲಕಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಬೇಲಿಯಿಂದ ಸುಮಾರು 2.7 ಕಿ.ಮೀ. ದೂರದಲ್ಲಿ ಪ್ಯಾಕೆಟ್‌ನಲ್ಲಿ ಪಿಸ್ತೂಲ್ ಪತ್ತೆಯಾಗಿದೆ ಎಂದು ಅಧಿಕಾರಿಗಳುಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT