ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: ಗಡಿಯಲ್ಲಿ ಕಳ್ಳಸಾಗಣೆಯಾಗುತ್ತಿದ್ದ ಶಸ್ತ್ರಾಸ್ತ್ರ ಬಿಎಸ್‌ಎಫ್ ವಶಕ್ಕೆ

Last Updated 7 ಅಕ್ಟೋಬರ್ 2021, 8:01 IST
ಅಕ್ಷರ ಗಾತ್ರ

ಜಮ್ಮು: ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಲು ಭಯೋತ್ಪಾದಕರು ನಡೆಸಿದ ಪ್ರಮುಖ ಪ್ರಯತ್ನವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುರುವಾರ ವಿಫಲಗೊಳಿಸಿದೆ.

ಈ ಮೂಲಕ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‌ಎಫ್‌ ಡಿಐಎಸ್‌ ಎಸ್‌.ಪಿ.ಎಸ್‌ ಸಂಧು ತಿಳಿಸಿದ್ದಾರೆ.

ನಾಲ್ಕು ಪಿಸ್ತೂಲ್‌ಗಳು, ಎಂಟು ಪಿಸ್ತೂಲ್‌ ಮ್ಯಾಗಜಿನ್‌ಗಳು, 232 ಸುತ್ತು ಗುಂಡುಗಳನ್ನು ಬಿಎಸ್‌ಎಫ್‌ ವಶಕ್ಕೆ ಪಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದಕರು ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ಕಳ್ಳಸಾಗಾಣೆಗೆ ಡ್ರೋನ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT