ಶುಕ್ರವಾರ, ಫೆಬ್ರವರಿ 26, 2021
32 °C
ಬಿಎಸ್‌ಎಫ್ ಯೋಧರಿಂದ ಕಾರ್ಯಾಚರಣೆ

ಪಂಜಾಬ್‌ ಗಡಿಯಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಗುರುವಾರ ಮುಂಜಾನೆ ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂಜಾನೆ 2.30 ರ ಸುಮಾರಿಗೆ ಅಟಾರಿಯ ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಯಿತು ಎಂದು ಮೂಲಗಳು ತಳಿಸಿವೆ.

ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದಟ್ಟವಾದ ಮಂಜು ಆವರಿಸಿರುವುದರಿಂದ ತಕ್ಷಣಕ್ಕೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು