ಗುರುವಾರ , ಜುಲೈ 7, 2022
23 °C

ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಬಿಎಸ್‌ಎಫ್ ಯೋಧ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಪಾಲನಪುರ: ಗುಜರಾತಿನ ಬನಸ್ಕಾಂತ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ ನಿಯೋಜಿಸಿದ್ದ ಗಡಿ ಭದ್ರತಾ ಪಡೆಯ ಯೋಧರೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಭೋಮರಂ ರುಗಾರಂ (44) ಎಂಬುವವರು ಸೋಮವಾರ ಲಿಂಬ್ಡಿ ಚೆಕ್‌ಪೋಸ್ಟ್ ಬಳಿಯಲ್ಲಿ ಶೂಟ್ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲೆಯ ಮಾವ್ಸರಿಗೆ ರವಾನಿಸಲಾಗಿದೆ.

ಭೋಮರಂ ರುಗಾರಂ ರಾಜಸ್ಥಾನದ ನಾಗೌರ್‌ನವರು. ಘಟನೆ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು