ಮಂಗಳವಾರ, ಏಪ್ರಿಲ್ 20, 2021
26 °C

ರಾಜಸ್ತಾನ: ತರಬೇತಿ ವೇಳೆ ಆಕಸ್ಮಿಕ ಸ್ಫೋಟ– ಬಿಎಸ್‌ಎಫ್‌ ಯೋಧ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಸಲ್ಮೇರ್: ‘ರಾಜಸ್ಥಾನದ ಜೈಸಲ್ಮೇರ್‌ನ ಲಾಥಿ ಫೈರಿಂಗ್‌ ರೇಂಜ್‌ನಲ್ಲಿ ಬಂದೂಕು ತರಬೇತಿ ವೇಳೆ ಸಂಭವಿಸಿದ ಆಕಸ್ಮಿಕ ಸ್ಫೋಟದಿಂದಾಗಿ ಬಿಎಸ್‌ಎಫ್‌ ಯೋಧರೊಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ’ ಎಂದು ಪೊಲೀಸರು ಬುಧವಾರ ತಿಳಿಸಿದರು.

‘ಮಂಗಳವಾರ ರಾತ್ರಿ ತರಬೇತಿ ವೇಳೆ ಬಂದೂಕಿನ ಮುಂದಿನ ಭಾಗ ಸ್ಫೋಟಗೊಂಡ ಕಾರಣ ಬಿಎಸ್‌ಎಫ್‌ನ ಐದು ಮಂದಿ ಗಾಯಗೊಂಡಿದ್ದರು. ಇದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸತೀಶ್‌ ಕುಮಾರ್‌(32) ಎಂಬುವರು ಮೃತಪಟ್ಟಿದ್ದರು. ಈ ಬಗ್ಗೆ ಅವರು ಕುಟುಂಬದವರಿಗೆ ತಿಳಿಸಲಾಗಿದೆ’ ಎಂದು ಅವರು ಹೇಳಿದರು.

 

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು