ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಮೂಲದ ಬಿ.ಎಸ್‌.ಎಫ್ ಯೋಧ ಛತ್ತೀಸ್‌ಗಡದಲ್ಲಿ ಆತ್ಮಹತ್ಯೆ

Last Updated 21 ಜುಲೈ 2021, 10:00 IST
ಅಕ್ಷರ ಗಾತ್ರ

ರಾಯಪುರ: ನಕ್ಸಲ್‌ ಪೀಡಿತ ಪ್ರದೇಶ ಛತ್ತೀಸ್‌ಗಡದ ಕಾಂಕೆರ್‌ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್‌)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೂಲದ ಯೋಧರೊಬ್ಬರು ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಯೋಧನನ್ನು ಲಕ್ಷ್ಮಣ ಎನ್.ಜಿ (30) ಎಂದು ಗುರುತಿಸಲಾಗಿದೆ. ಅವರು ಬಿ.ಎಸ್.ಎಫ್ ನ 81ನೇ ಬಟಾಲಿಯನ್ನಲ್ಲಿ ಕೆಲಸ ಮಾಡುತ್ತಿದ್ದರು.

ಲಕ್ಷ್ಮಣ ಅವರು ತಲೆಗೆ ಗುಂಡು ಹೊಡೆದುಕೊಂಡಾಗ ಸಹೋದ್ಯೋಗಿಗಳು ಸೇರಿ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ಪರಿಸ್ಥಿತಿ ಗಂಭೀರ ಆಗಿದ್ದರಿಂದ ಅವರನ್ನು ಏರ್ ಲಿಫ್ಟ್ ಮೂಲಕ ರಾಯಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅವರು ರಜೆ ಮುಗಿಸಿಕೊಂಡು ಜುಲೈ 7 ರಂದು ಬಂದಿದ್ದರು ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಇದೇ ಕ್ಯಾಂಪ್ ನಲ್ಲಿ ಕಳೆದ ಡಿಸೆಂಬರ್‌ನಲ್ಲಿ ಬಿ.ಎಸ್.ಎಫ್ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT