ಸೋಮವಾರ, ಸೆಪ್ಟೆಂಬರ್ 26, 2022
24 °C

ಬಾಂಗ್ಲಾ ಗಡಿ: ಬಿಎಸ್‌ಎಫ್ ಯೋಧನ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಬಾಂಗ್ಲಾದೇಶದ ಗಡಿ ಪ್ರದೇಶದ ಬಳಿ ಸೋಮವಾರ ಕಳ್ಳಸಾಗಣೆಗಾರರು ಬಿಎಸ್‌ಎಫ್‌ ಯೋಧನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆನ್ಸೆಡಿಲ್ ಕೆಮ್ಮಿನ ಸಿರಪ್‌ಗಳನ್ನು ಸಂಗ್ರಹಿಸಲಾಗಿರುವ ಕುರಿತು ದೊರೆತ ಖಚಿತ ಸುಳಿವಿನ ಮೇರೆಗೆ ಬಿಎಸ್‌ಎಫ್ ತಂಡವು ಛಾಪ್ರಾ ಪ್ರದೇಶದಲ್ಲಿ ಮನೆಯೊಂದರ ಮೇಲೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಕಳ್ಳ ಸಾಗಣೆಗಾರರ ಗುಂಪು ಹಾರಿಸಿದ ಗುಂಡಿಗೆ ಯೋಧ ಸಾವಿಗೀಡಾಗಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು