ಶುಕ್ರವಾರ, ಅಕ್ಟೋಬರ್ 2, 2020
24 °C

ರಾಜಸ್ಥಾನ | ಪಾಕಿಸ್ತಾನದ ನುಸುಳುಕೋರನ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜಸ್ಥಾನದ ಬರ್ಮೆರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆಯು(ಬಿಎಸ್‌ಎಫ್‌) ಶುಕ್ರವಾರ ತಡರಾತ್ರಿ ಹತ್ಯೆ ಮಾಡಿದೆ.

‘ಅಂತರರಾಷ್ಟ್ರೀಯ ಗಡಿ ಮೂಲಕ ಒಳನುಸುಳಲು ಯತ್ನಿಸಿದ ವ್ಯಕ್ತಿಗೆ ಬಿಎಸ್‌ಎಫ್‌ ಯೋಧರು ಎಚ್ಚರಿಕೆ ನೀಡಿದರು. ಆದರೆ, ಆತ ಗಡಿದಾಟಲು ಪ್ರಯತ್ನಿಸಿದ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಈತ ಹತನಾಗಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶುಕ್ರವಾರ ತಡರಾತ್ರಿ 1 ಗಂಟೆ ಸುಮಾರಿಗೆ ಬಕ್ಸರ್‌ ಪ್ರದೇಶದ ಬಳಿ ಘಟನೆ ನಡೆದಿದ್ದು. ಈ ವೇಳೆ ಪಾಕಿಸ್ತಾನದಿಂದ 10–15 ಟಾರ್ಚ್‌ಗಳ ಬೆಳಕು ಕಾಣಿಸಿಕೊಂಡಿತ್ತು ಮತ್ತು ಶಬ್ದ ಕೇಳಿ ಬಂದಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು