ಪಾಕ್ ಸೈನಿಕರ ದಾಳಿ: ಬಿಎಸ್‌ಎಫ್ ಅಧಿಕಾರಿ ಹುತಾತ್ಮ

ಜಮ್ಮು: ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಡೆಸಿದ ಗುಂಡಿನ ದಾಳಿಗೆ ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
'ಮೆಂಧರ್ ಸೆಕ್ಟರ್‌ನ ತಾರ್ಕುಂಡಿ ಪ್ರದೇಶದಲ್ಲಿ ಪಾಕ್ ಸೈನಿಕರು ಗಡಿಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ತಕ್ಕ ಉತ್ತರ ನೀಡಿವೆ' ಎಂದು ಭದ್ರತಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.