ಭಾನುವಾರ, ಮೇ 29, 2022
22 °C

ಭಾರತ-ಪಾಕ್ ಗಡಿಯಲ್ಲಿ ಚೀನಾ ನಿರ್ಮಿತ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪಂಜಾಬ್‌ನ ಭಾರತ- ಪಾಕಿಸ್ತಾನ ಗಡಿಯಲ್ಲಿ ಶುಕ್ರವಾರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಡ್ರೋನ್‌ವೊಂದನ್ನು ಹೊಡೆದುರುಳಿಸಿದೆ.

ಇದು ಚೀನಾ ನಿರ್ಮಿತ ಡ್ರೋನ್ ಆಗಿದೆ. ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶುಕ್ರವಾರ ರಾತ್ರಿ 11:10 ರ ಸುಮಾರಿಗೆ ಡ್ರೋನ್‌ ಅನ್ನು ಪತನಗೊಳಿಸಲಾಗಿದೆ.

ಈ ಡ್ರೋನ್‌ ಗಡಿಯಿಂದ ಸುಮಾರು 150 ಮೀಟರ್ ದೂರ ಮತ್ತು 300 ಮೀಟರ್ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು ಎಂದು ಭದ್ರತಾ ಪಡೆ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು