ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಗಡಿಯೊಳಗೆ ನುಸುಳಿದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

Last Updated 8 ಫೆಬ್ರುವರಿ 2023, 6:27 IST
ಅಕ್ಷರ ಗಾತ್ರ

ನವದಹೆಲಿ: ಪಂಜಾಬ್‌ನಲ್ಲಿ ಗಡಿಯೊಳಗೆ ನುಸುಳಿದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಸೇನೆಯ ವಕ್ತಾರ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಗಡಿಯಲ್ಲಿ (ಐಡಿ) ಪಾಕಿಸ್ತಾನದ ಭೂಪ್ರದೇಶದಲ್ಲಿ ಡ್ರೋನ್ ಪತನಗೊಂಡಿದೆ ಎಂದು ಹೇಳಿದ್ದಾರೆ.

ಪಂಜಾಬ್‌ನ ಅಮೃತಸರ ಸೆಕ್ಟರ್‌ನ ಬಾಬಾಪೀರ್ ಗಡಿ ಪೋಸ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ಘಟನೆ ನಡೆದಿದೆ.

ಡ್ರೋನ್ ದಾಳಿ ತಡೆಗಟ್ಟಲು ಬಿಎಸ್‌ಎಫ್ ಸನ್ನದ್ಧವಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದ ಗಡಿಯೊಳಗೆ ನುಸುಳಿದ ಡ್ರೋನ್ ಮೇಲೆ ಬಿಎಸ್‌ಎಫ್ ಗುಂಡು ಹಾರಿಸಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT