ಶನಿವಾರ, ನವೆಂಬರ್ 28, 2020
24 °C

ಕದನವಿರಾಮ ಉಲ್ಲಂಘನೆ: ಪಾಕ್‌ ಪಡೆಗಳಿಂದ ಗುಂಡಿನ ದಾಳಿ ಬಿಎಸ್ಎಫ್‌ ಎಸ್‌ಐ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶುಕ್ರವಾರ ಪಾಕಿಸ್ತಾನದ ಪಡೆಗಳು ಕದನವಿರಾಮ ಉಲ್ಲಂಘಿಸಿವೆ. ಗುಂಡಿನ ದಾಳಿಯಿಂದಾಗಿ ಬಿಎಸ್‌ಎಫ್‌ನ ಸಬ್‌ ಇನ್ಸ್ ಪೆಕ್ಟರ್‌ವೊಬ್ಬರು ಮೃತಪಟ್ಟಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾರಾಮುಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಸಬ್‌ ಇನ್ಸ್ ಪೆಕ್ಟರ್ ರಾಕೇಶ್ ದೋವಲ್ ಮೃತಪಟ್ಟಿದ್ದಾರೆ. ಯೋಧರೊಬ್ಬರ ತಲೆಗೆ ತೀವ್ರ ಪೆಟ್ಟಾಗಿದೆ. ಇನ್ನೊಬ್ಬ ಯೋಧ ವಾಸುರಾಜಾ ಅವರಿಗೆ ಅಲ್ಪಪ್ರಮಾಣದಲ್ಲಿ ಪೆಟ್ಟಾಗಿದೆ ಎಂದು ತಿಳಿಸಿದ್ದಾರೆ.

ವೈರಿ ದೇಶದ ಪಡೆಗಳ ಕದನವಿರಾಮ ಉಲ್ಲಂಘನೆ ವಿರುದ್ಧದ ಹೋರಾಟದಲ್ಲಿ ಎಸ್‌ಐ ಹುತಾತ್ಮರಾಗಿದ್ದಾರೆ. ಇವರು ಉತ್ತರಾಖಂಡ ನಿವಾಸಿ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗುಂಡಿನ ದಾಳಿ ಘಟನೆಗಳು ಮುಂದುವರಿದಿವೆ.  ಬಿಎಸ್‌ಎಫ್  ಯೋಧರು ಇದಕ್ಕೆ ಪರಿಣಾಮಕಾರಿಯಾಗಿ ಪ್ರತಿರೋಧ ತೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು