ಭಾನುವಾರ, ಮೇ 22, 2022
21 °C

ಪಾಕ್‌ ನುಸುಳುಕೋರರ ಯತ್ನ ವಿಫಲಗೊಳಿಸಿದ ಬಿಎಸ್‌ಎಫ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಪಂಜಾಬ್‌ನ ಪಠಾಣ್‌ಕೋಟ್‌ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ಪ್ರವೇಶಿಸುವ ಪಾಕಿಸ್ತಾನದ ಮೂವರು ನುಸುಳುಕೋರರ ಯತ್ನವನ್ನು ಬಿಎಸ್‌ಎಫ್‌ ವಿಫಲಗೊಳಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.

ಪಾಕಿಸ್ತಾನದ ಮೂವರು ಬುಧವಾರ ರಾತ್ರಿ 10.15ರ ವೇಳೆಗೆ ಗಡಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದುದನ್ನು ಪಹರಿಪುರ ಗಡಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು, ಗಮನಿಸಿದರು. ನಂತರ ಗುಂಡು ಹಾರಿಸಿ, ಒಳನುಸುಳುವ ಅವರ ಯತ್ನವನ್ನು ವಿಫಲಗೊಳಿಸಿದರು ಎಂದು ಅಧಿಕಾರಿಗಳು ಹೇಳಿದರು.

ಬಿಎಸ್‌ಎಫ್‌ ಯೋಧರು ಹಾಗೂ ಪಂಜಾಬ್‌ ಪೊಲೀಸರು ಆ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದೂ ಅಧಿಕಾರಿಗಳು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು